ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಎಂ. ಮದನಗೋಪಾಲ ಅವರನ್ನು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಸೋಮವಾರ ಕರ್ತವ್ಯಕ್ಕೆ ಹಾಜರಾಗಿರುವ ಅವರು ‘ಈ ಹುದ್ದೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ವೇತನ, ಇತರ ಭತ್ಯೆಯನ್ನು ಪಡೆಯುವುದಿಲ್ಲ. ಗೌರವಧನವಾಗಿ ಕೇವಲ ₹1(ಒಂದು ರೂಪಾಯಿ) ಮಾತ್ರ ಪಡೆಯಲು ಇಚ್ಚಿಸಿದ್ದೇನೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.