ADVERTISEMENT

ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಮಾ ಜೋಯಿಸ್ ನಿಧನ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 21:20 IST
Last Updated 16 ಫೆಬ್ರುವರಿ 2021, 21:20 IST
ರಾಮಾ ಜೋಯಿಸ್
ರಾಮಾ ಜೋಯಿಸ್   

ಬೆಂಗಳೂರು: ಪಂಜಾಬ್‌–ಹರಿಯಾಣ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ಎಂ.ರಾಮಾ ಜೋಯಿಸ್ (89) ಅವರು ಮಂಗಳವಾರ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಮಕ್ಕಳು ಮತ್ತು ಮೂವರು ಮೊಮ್ಮಕ್ಕಳು ಇದ್ದಾರೆ. ಅವರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು.

ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಬೆಳಿಗ್ಗೆ 7.30ಕ್ಕೆ ಕೊನೆಯುಸಿರೆಳೆದರು. ಅವರ ನಿವಾಸದಲ್ಲಿಯೇ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 5.30ಕ್ಕೆ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ADVERTISEMENT

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯಲ್ಲಿ ಜನಿಸಿದ ಅವರು, ಕಾನೂನು ಪದವೀಧರರಾಗಿದ್ದರು. ನ್ಯಾಯಮೂರ್ತಿಯಾಗಿ ನಿವೃತ್ತರಾದ ನಂತರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.