ನವದೆಹಲಿ: ಐದು ಗ್ಯಾರಂಟಿ ಯೋಜನೆಗಳನ್ನು ಸ್ವ ಇಚ್ಛೆಯಿಂದ ಬಿಟ್ಟುಕೊಡುವವರಿಗೆ ಅದಕ್ಕೆ ಅವಕಾಶ ಮಾಡಿಕೊಡಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು.
ಮಂಗಳವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಮಾಹಿತಿ ನೀಡಿದ್ದೇನೆ’ ಎಂದರು.
‘ಕಾರವಾರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳು ನಮಗೆ ಬೇಡ ಎಂದು ಕೆಲವು ಮಹಿಳೆಯರು ಹೇಳಿದ್ದರು. ಈ ಯೋಜನೆಗಳನ್ನು ರಾಜ್ಯ ಸರ್ಕಾರ ನಿಲ್ಲಿಸುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.