ADVERTISEMENT

ಕಂದಾಯ ಇಲಾಖೆ ಕಡತ ವಿಲೇವಾರಿ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 23 ಜೂನ್ 2019, 20:00 IST
Last Updated 23 ಜೂನ್ 2019, 20:00 IST
   

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಕಡತಗಳ ವಿಲೇವಾರಿಗೆ ‘ಕಡತ ವಿಲೇವಾರಿ ಸಪ್ತಾಹ’ವನ್ನು ಜೂನ್ 24ರಿಂದ 30ರ ವರೆಗೆ ಆಚರಿಸಲಾಗುತ್ತಿದೆ.

ಸಾಮಾನ್ಯ ಕಡತಗಳ ಜತೆಗೆ ದೀರ್ಘ ಕಾಲದಿಂದ ಬಾಕಿ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡಲಾಗುತ್ತದೆ. ಶೀಘ್ರ ವಿಲೇವಾರಿಯಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ನಿಯಮದ ವ್ಯಾಪ್ತಿಯಲ್ಲೇ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

2018 ನವೆಂಬರ್‌ನಲ್ಲಿ ಕಡತ ವಿಲೇವಾರಿ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ 2.50 ಲಕ್ಷ ಕಡತ ವಿಲೇವಾರಿ ಮಾಡಲಾಗಿತ್ತು ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.