ADVERTISEMENT

17 ಪ್ರಕರಣಗಳಲ್ಲಿ ಎಸ್‌ಡಿಪಿಐ ಭಾಗಿ: ಕಂದಾಯ ಸಚಿವ ಅಶೋಕ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 20:17 IST
Last Updated 14 ಆಗಸ್ಟ್ 2020, 20:17 IST
ಸಚಿವ ಆರ್‌.ಅಶೋಕ
ಸಚಿವ ಆರ್‌.ಅಶೋಕ   

ಬೆಂಗಳೂರು: ‘2008ರಿಂದ ಇಲ್ಲಿಯವರೆಗೆ ನಡೆದ 17 ಕೊಲೆ ಹಾಗೂ ಅಪಹರಣ ಪ್ರಕರಣಗಳಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರು ಭಾಗಿಯಾದ ಬಗ್ಗೆ ಪುರಾವೆಗಳು ಇವೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈಸೂರಿನ ರಾಜು, ಮಡಿಕೇರಿಯ ಕುಟ್ಟಪ್ಪ, ಪ್ರವೀಣ್‌ ಪೂಜಾರಿ, ಪ್ರಶಾಂತ್‌ ಪೂಜಾರಿ, ಶಿವಾಜಿನಗರದ ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌, ಶರತ್‌ ಮಡಿವಾಳ ಕೊಲೆ ಪ್ರಕರಣಗಳಲ್ಲಿ ಈ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಹುಣಸೂರಿನ ಇಬ್ಬರು ಯುವಕರನ್ನು ಅಪಹರಿಸಿ ಕೊಲೆ ಮಾಡಿದ್ದರು’ ಎಂದರು.

‘ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆಗೆ ಕಾಂಗ್ರೆಸ್‌ನಲ್ಲಿರುವ ಭಿನ್ನಾಭಿಪ್ರಾಯ ಹಾಗೂ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಭಿನ್ನಾಭಿಪ್ರಾಯ ಕಾರಣ’ ಎಂದು ಅವರು ಹೇಳಿದರು.

ADVERTISEMENT

‘ಈ ಗಲಭೆಯಲ್ಲಿ ಪಾಲಿಕೆಯ ಕಾಂಗ್ರೆಸ್‌ ಸದಸ್ಯರ ಕೈವಾಡ ಇದೆ. ಪಾಲಿಕೆಯ ಮಾಜಿ ಮೇಯರ್‌ ಸಂಪತ್‌ರಾಜ್‌ ಕೈವಾಡ ಇದೆ ಎಂದು ಕಾಂಗ್ರೆಸ್‌ ನಾಯಕರೊಬ್ಬರು ಸಿದ್ದರಾಮಯ್ಯ ಅವರ ಬಳಿ ಹೇಳಿದ್ದಾರೆ. ರಾಜಕೀಯ ಅಸ್ತಿತ್ವಕ್ಕಾಗಿ ಈ ಗಲಭೆ ನಡೆದಿದೆ’
ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.