ADVERTISEMENT

ವಿಡಿಯೊ ಹಂಚಿಕೊಳ್ಳುವವರ ವಿರುದ್ಧವೂ ಪ್ರಕರಣ: ಎಸ್‌ಐಟಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 6 ಮೇ 2024, 0:28 IST
Last Updated 6 ಮೇ 2024, 0:28 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗೂರು: ‘ಹಲವು ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಆ್ಯಪ್‌ಗಳಲ್ಲಿ ಹಂಚಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಯಾರಾದರೂ ಹಂಚಿಕೊಳ್ಳುವುದು ಪತ್ತೆಯಾದರೆ ಅಂಥವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗುದು’ ಎಂದು ಎಎಸ್‌ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ‘ವಿಡಿಯೊ ಹಂಚಿಕೊಳ್ಳುವವರನ್ನು ತಂತ್ರಜ್ಞಾನ ಸಹಾಯದಿಂದ ಪತ್ತೆ ಹಚ್ಚಲು ಸಾಧ್ಯವಿದೆ. ಸಂತ್ರಸ್ತೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದಿದ್ದಾರೆ.

ADVERTISEMENT

‘ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವಿಲ್ಲ. ಸಹಾಯವಾಣಿ 6360938947 ಮೂಲಕ ಸಂಪರ್ಕಿಸಿ ದೂರು ನೀಡಬಹುದು. ದೂರು ಕೊಟ್ಟವರ ವೈಯಕ್ತಿಕ ವಿವರವನ್ನು ಗೌಪ್ಯವಾಗಿರಿಸಲಾಗುವುದು. ವೈದ್ಯರು ಹಾಗೂ ವೃತ್ತಿಪರರಿಂದ ಕೌನ್ಸೆಲಿಂಗ್ ಮಾಡಿಸಲಾಗುವುದು. ಸಂತ್ರಸ್ತೆಯರು ಹೆದರಿಕೊಳ್ಳುವ ಅವಶ್ಯಕತೆ ಇಲ್ಲ’ ಎಂದು ತಿಳಿಸಿದ್ದಾರೆ.

‘ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು, ಸಂಘ ಸಂಸ್ಥೆಗಳು ಅಥವಾ ಇತರರು ಸಂತ್ರಸ್ತೆಯರ ಗುರುತು ಬಹಿರಂಗಪಡಿಸಬಾರದು. ಈ ವಿಚಾರದಲ್ಲಿ ನಿಯಮ ಮೀರಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.