ADVERTISEMENT

Video: ಅಪರಾಧ ಪ್ರಕರಣಗಳ ಏರಿಕೆ ನಡುವೆ ಹೆಚ್ಚುತ್ತಿದೆ ಪೊಲೀಸರ ಭ್ರಷ್ಟಾಚಾರ!

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 11:14 IST
Last Updated 18 ಫೆಬ್ರುವರಿ 2026, 11:14 IST

ಗೃಹ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಕಳೆದ ವರ್ಷ ಎರಡು ಲಕ್ಷಕ್ಕೂ ಅಧಿಕ ಅಪರಾಧ ಪ್ರಕರಣಗಳು ದಾಖಲಾಗಿವೆ. ಸೈಬರ್‌ ಕ್ರೈಂ ಪ್ರಕರಣಗಳ ಸಂಖ್ಯೆ 14 ಸಾವಿರಕ್ಕೂ ಹೆಚ್ಚಾಗಿದೆ. ಡ್ರಗ್ಸ್‌ ಜಾಲ, ಸೈಬರ್‌ ವಂಚನೆ, ಡಿಜಿಟಲ್‌ ಅರೆಸ್ಟ್‌, ಅತ್ಯಾಚಾರ, ಲೈಂಗಿಕ ದೌರ್ಜನ್ಯ, ದರೋಡೆ, ಕೊಲೆ, ಸುಲಿಗೆ ಇತ್ಯಾದಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೆಲವು ಪ್ರಕರಣಗಳಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳೇ ಭಾಗಿಯಾಗಿರುವುದು ಆತಂಕದ ವಿಚಾರ. ಈ ಹಿನ್ನೆಲೆಯಲ್ಲಿ, ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮತ್ತು ಪೊಲೀಸ್‌ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಕುರಿತ ವಿಶ್ಲೇಷಣಾತ್ಮಕ ಚರ್ಚೆ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.