ಬೆಂಗಳೂರು: ಆರ್ಥಿಕ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾದ ಎಲ್.ಕೆ.ಅತೀಕ್ ಅವರು ಶುಕ್ರವಾರ ರಿತೇಶ್ ಕುಮಾರ್ ಸಿಂಗ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಅತೀಕ್ ಅವರು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.
ವಿ.ರಶ್ಮಿ ಮಹೇಶ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ನಂದಿನಿ ಕೆ.ಆರ್ ಅವರನ್ನು ಮಂಡ್ಯ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.