ADVERTISEMENT

ಪ್ರತಿ ಹಳ್ಳಿಯ ಪ್ರತಿ ಮನೆಗೆ ನದಿ ಮೂಲದಿಂದ ಕುಡಿಯುವ ನೀರು ಪೂರೈಕೆ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 9:26 IST
Last Updated 20 ಜೂನ್ 2019, 9:26 IST
   

ಬೆಂಗಳೂರು: ರಾಜ್ಯದ ಎಲ್ಲ ಹಳ್ಳಿಗಳ ಜನರ ಮನೆ ಬಾಗಿಲಿಗೆ ನದಿ ಮೂಲದಿಂದಲೇ ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಸಮ್ಮಿಶ್ರ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ‘ಮೈತ್ರಿ ಪರ್ವ’ ಪುಸ್ತಕ ಬಿಡುಗಡೆ ಮಾಡಿ ಈ ವಿಷಯ ತಿಳಿಸಿದರು.

ಈ ಯೋಜನೆಗೆ ₹56, 000 ಕೋಟಿ ಬೇಕಾಗುತ್ತದೆ. ಇದಕ್ಕೆ ಸಮಗ್ರ ಯೋಜನಾ ವರದಿ ರೂಪಿಸಲು ಸೂಚಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಅಲ್ಲದೆ, ಬೆಂಗಳೂರು ಅಭಿವೃದ್ಧಿಗಾಗಿ ಉಪಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮುಂದಿನ ತಿಂಗಳು ಬೆಂಗಳೂರು ಮೆಟ್ರೊ ಪಾಲಿಟನ್ ಪ್ರಾಧಿಕಾರದಸಭೆ ಕರೆಯಲಾಗುವುದು. ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ADVERTISEMENT

ಲೋಕಸಭೆಯಲ್ಲಿ ಮೈತ್ರಿ ಪಕ್ಷಕ್ಕೆ ಹಿನ್ನಡೆ ಆಗಿದೆ. ನಮ್ಮ ನಿರ್ಧಾರ ಸರಿಯಲ್ಲ ಎಂದು ಜನ ಬೇಸರ ಮಾಡಿಕೊಳ್ಳುವಂತೆ ನಾವು ಅಭಿವೃದ್ಧಿ ಕೆಲಸ ಮಾಡುತ್ತೇವೆ. ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಜನರ ಗಮನ ಸೆಳೆಯುತ್ತೇವೆ. ಶಾಶ್ವತ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.