ADVERTISEMENT

‘ರೊ–ರೊ ರೈಲು’ ಸೇವೆಗೆ ಚಾಲನೆ

ಬೆಂಗಳೂರು– ಸೊಲ್ಲಾಪುರ ಮಧ್ಯೆ ಟ್ರಕ್‌, ಸರಕು ಸಾಗಣೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2020, 19:39 IST
Last Updated 30 ಆಗಸ್ಟ್ 2020, 19:39 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ‘ರೊ–ರೊ: ರೈಲಿಗೆ ಭಾನುವಾರ ಹಸಿರುನಿಶಾನೆ ತೋರಿಸಿದರು. ಕಂದಾಯ ಸಚಿವ ಆರ್‌. ಅಶೋಕ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಇದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ‘ರೊ–ರೊ: ರೈಲಿಗೆ ಭಾನುವಾರ ಹಸಿರುನಿಶಾನೆ ತೋರಿಸಿದರು. ಕಂದಾಯ ಸಚಿವ ಆರ್‌. ಅಶೋಕ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಇದ್ದರು.   

ಬೆಂಗಳೂರು: ನೆಲಮಂಗಲ ಮತ್ತು ಸೊಲ್ಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ‘ರೊ-ರೊ’ (ರೋಲ್ ಆನ್ ರೋಲ್ ಆಫ್) ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಿಂದ ವಿಡಿಯೊ ಮೂಲಕ ಭಾನುವಾರ ಹಸಿರು ನಿಶಾನೆ ತೋರಿಸಿದರು.

ಬಳಿಕ ಮಾತನಾಡಿದ ಯಡಿಯೂರಪ್ಪ, ‘ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಾರಿಗೆ ಪ್ರಕಾರಗಳನ್ನು ಒಗ್ಗೂಡಿಸುವ ‘ಮಲ್ಟಿ ಮಾಡೆಲ್‌ ಟ್ರಾನ್ಸ್‌ಪೋರ್ಟ್ ಸಿಸ್ಟಂ‘ನ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಅವರ ಆಶಯದಂತೆ ಈ ಸೇವೆ ಆರಂಭಗೊಳ್ಳುತ್ತಿದೆ’ ಎಂದರು.

‘42 ಟ್ರಕ್‍ಗಳನ್ನು ರೊ-ರೊ ರೈಲಿನಲ್ಲಿ ಸಾಗಿಸಬಹುದಾಗಿದೆ. ನೆಲಮಂಗಲ ಹಾಗೂ ಬಾಲೆಯಲ್ಲಿ ಈ ಟ್ರಕ್‍ಗಳನ್ನು ರೈಲಿಗೆ ಹತ್ತಿಸುವ ಹಾಗೂ ರೈಲಿಗೆ ಇಳಿಸುವ ಕಾರ್ಯ ನಡೆಯಲಿದೆ ’ ಎಂದೂ ಅವರು ಹೇಳಿದರು.

ADVERTISEMENT

‘ಗೋದಾಮುಗಳಿಂದ ಅಥವಾ ಮಾರುಕಟ್ಟೆಯಿಂದ ಲೋಡ್ ಆದ ಟ್ರಕ್‍ಗಳು ರೈಲ್ವೆ ನಿಲ್ದಾಣದಲ್ಲಿ ಬಂದು ರೈಲಿನಲ್ಲಿ ಲೋಡ್ ಆಗುತ್ತವೆ. ರೈಲುಗಳ ಮೂಲಕ ಈ ಟ್ರಕ್‍ಗಳು ಮತ್ತೊಂದು ನಗರಕ್ಕೆ ಬಂದು ಗೋದಾಮು ಅಥವಾ ಮಾರುಕಟ್ಟೆಗೆ ಹೋಗಿ ಅನ್‍ಲೋಡ್ ಮಾಡಲು ಈ ವ್ಯವಸ್ಥೆಯಿಂದ ಸಹಕಾರಿಯಾಗುತ್ತದೆ. ಒಂದು ರೊ-ರೊ ರೈಲಿನಲ್ಲಿ ಸರಕು ಹಾಗೂ ಟ್ರಕ್‍ಗಳೆರಡರ ಭಾರ ಸೇರಿ 1,260 ಟನ್ ಸಾಗಿಸಬಹುದು. ಈ ವ್ಯವಸ್ಥೆ ಪರಿಸರಸ್ನೇಹಿಯಾಗಿದ್ದು, ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.