ADVERTISEMENT

ರಸ್ತೆ ಅಪಘಾತಗಳು: ರಾಜ್ಯದಲ್ಲಿ 6 ತಿಂಗಳಲ್ಲಿ 5,830 ಜನ ಸಾವು!

ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಸೆಪ್ಟೆಂಬರ್ 2023, 7:50 IST
Last Updated 5 ಸೆಪ್ಟೆಂಬರ್ 2023, 7:50 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: 2023–24ನೇ ಸಾಲಿನ ಮೊದಲಾರ್ಧದಲ್ಲಿ ಕರ್ನಾಟಕ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 5,830 ಜನ ಮೃತಪಟ್ಟಿದ್ದಾರೆ.

ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಈ ಮಾಹಿತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

ಕಳೆದ ಮೇ ನಲ್ಲಿ 1,094 ಜನ, ಜೂನ್‌ನಲ್ಲಿ 965, ಜುಲೈ 807, ಆಗಸ್ಟ್‌ನಲ್ಲಿ 795 ಜನ ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮೇ ತಿಂಗಳಿಗೆ ಹೋಲಿಸಿದರೆ ಆಗಸ್ಟ್‌ನಲ್ಲಿ ಸಾವುಗಳ ಪ್ರಮಾಣ ಕಡಿಮೆಯಾಗಿರುವುದನ್ನು ಗಮನಿಸಬಹುದು. ಸಾವುಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಲೋಕ್ ಕುಮಾರ್, ರಸ್ತೆ ಅಪಘಾತಗಳನ್ನು ತಡೆಯಲು ತೀವ್ರವಾಗಿ ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ರಸ್ತೆ ಅಪಘಾತಗಳು ನಡೆಯುತ್ತಿವೆ ಎಂದಿದ್ದಾರೆ.

ಜನರ ಪ್ರಾಣ ಉಳಿಸಲು ರಸ್ತೆ ಸುರಕ್ಷತಾ ಉಪಕ್ರಮಗಳನ್ನು ನಿರಂತರವಾಗಿ, ವ್ಯಾಪಕವಾಗಿ ತೆಗೆದುಕೊಳ್ಳುವುದು ತೀರಾ ಅವಶ್ಯವಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.