ADVERTISEMENT

ಆರೋಪಿಗೆ ಕೊರೊನಾ; ಬೈಯಪ್ಪನಹಳ್ಳಿ ಠಾಣೆ ಸೀಲ್‌ಡೌನ್

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 20:45 IST
Last Updated 8 ಜೂನ್ 2020, 20:45 IST

ಬೆಂಗಳೂರು: ಸುಲಿಗೆ ಆರೋಪದಡಿ ಬಂಧಿಸಲಾಗಿದ್ದ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಬೈಯಪ್ಪನಹಳ್ಳಿ ಠಾಣೆಯನ್ನು ಸೋಮವಾರ ಸೀಲ್‌ಡೌನ್ ಮಾಡಲಾಗಿದೆ.

ಜೀವನ್‌ಬಿಮಾನಗರ ಬಳಿಯ ನಿವಾಸಿಯಾದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದ ಠಾಣೆಯ ಪಿಎಸ್‌ಐ ಸೇರಿ 17 ಸಿಬ್ಬಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಸುಲಿಗೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಇತ್ತೀಚೆಗಷ್ಟೇ ಬಂಧಿಸಿದ್ದರು. ಮೂವರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದರು. ಅವರ ವರದಿ ಸೋಮವಾರ ಬಂದಿದ್ದು, ಒಬ್ಬಾತನಲ್ಲಿ ಸೋಂಕು ಇರುವುದು ಖಾತ್ರಿಯಾಗಿದೆ. ಇನ್ನಿಬ್ಬರನ್ನೂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ADVERTISEMENT

‘ಆರೋಪಿ ಠಾಣೆಯಲ್ಲಿದ್ದ. ಹೀಗಾಗಿ, ತಾತ್ಕಾಲಿಕವಾಗಿ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.