ADVERTISEMENT

ರಾಜೀನಾಮೆಗೆ ಸಿದ್ದರಾಮಯ್ಯ ಕಾರಣ: ಬೇಗ್

​ಪ್ರಜಾವಾಣಿ ವಾರ್ತೆ
Published 7 ಜುಲೈ 2019, 17:47 IST
Last Updated 7 ಜುಲೈ 2019, 17:47 IST
ರೋಷನ್‌ ಬೇಗ್‌
ರೋಷನ್‌ ಬೇಗ್‌   

ಬೆಂಗಳೂರು: ಕಾಂಗ್ರೆಸ್ ಮುಖಂಡರ ವಿರುದ್ಧ ಟೀಕೆ ಮಾಡಿ, ಪಕ್ಷದಿಂದ ಅಮಾನತುಗೊಂಡಿರುವ ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಸೋಮವಾರ ಅಥವಾ ಮಂಗಳವಾರ ರಾಜೀನಾಮೆ ನೀಡುವುದಾಗಿ ಬೇಗ್ ಸ್ಪಷ್ಟಪಡಿಸಿದ್ದು, ‘ನನ್ನ ರಾಜೀನಾಮೆಗೆ ಸಿದ್ದರಾಮಯ್ಯ ನೇರ ಹೊಣೆ’ ಎಂದು ಆರೋಪಿಸಿದ್ದಾರೆ.

‘ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಪರ‌ ಪ್ರಚಾರ ಮಾಡಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಂಡಿಲ್ಲ. ಆದರೆ ನನ್ನನ್ನು‌ ಪಕ್ಷದಿಂದ ಅಮಾನತು ಮಾಡಲಾಗಿದೆ. ಕಾಂಗ್ರೆಸ್‌ ಹಾಳಾಗಲು ಸಿದ್ದರಾಮಯ್ಯ ನಡವಳಿಕೆ‌ ಕಾರಣ. ರಾಮಲಿಂಗಾರೆಡ್ಡಿ ಉತ್ತಮ ನಿರ್ಧಾರ ‌ಕೈಗೊಂಡಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.