ADVERTISEMENT

ರೌಡಿಸಂ ಕಾಂಗ್ರೆಸ್ ಸಂಸ್ಕೃತಿ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 21:15 IST
Last Updated 5 ಆಗಸ್ಟ್ 2022, 21:15 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಬೆಂಗಳೂರು: ‘ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ಕಾಂಗ್ರೆಸ್‌ಗೆ ವಿರೋಧವಿದ್ದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿದೆ. ಅದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಇದು ಕಾಂಗ್ರೆಸ್‌ ಸಂಸ್ಕೃತಿಯನ್ನು ತೋರಿಸುತ್ತದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಬಿಬಿಎಂಪಿ ಮೀಸಲಾತಿಯನ್ನು 2015 ರ ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ನಿಯಮಗಳನ್ನು ಅನುಸರಿಸಿ ಮಾಡಲಾಗಿದೆ. ಕಾಂಗ್ರೆಸ್ ಸಹ ಹಿಂದೆ ಮಾಡಿದ್ದಾಗ ಏನಾಗಿತ್ತು ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲಾ ಶಾಸಕರ ಕ್ಷೇತ್ರಗಳಲ್ಲಿ ಏನಾಗಿತ್ತು ಎನ್ನುವುದು ಗೊತ್ತಿದೆ ಎಂದು ಹೇಳಿದರು.

ಸಾಮಾಜಿಕ ನ್ಯಾಯ ಪಾಲನೆ: ‘ನ್ಯಾಯಾಲಯದ ನಿರ್ದೇಶನದಂತೆ ವಾರ್ಡ್‌ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಪ್ರಕಟಿಸಲಾಗಿದೆ. ಇದರಲ್ಲಿ ಸಾಮಾಜಿಕ ನ್ಯಾಯ ಕಾಪಾಡಲಾಗಿದೆ. ಮೀಸಲಾತಿ ಸಿದ್ಧಪಡಿಸುವ ಸಂದರ್ಭದಲ್ಲಿ ಯಾವುದೇ ಪಕ್ಷ ಅಥವಾ ವ್ಯಕ್ತಿಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ನುರಿತ ಅಧಿಕಾರಿಗಳ ತಂಡ ಈ ಮೀಸಲಾತಿಯನ್ನು ಸಿದ್ಧಪಡಿಸಿವೆ. ಇದರಲ್ಲಿ ಪಕ್ಷದ ಹಸ್ತಕ್ಷೇಪವಿಲ್ಲ’ ಎಂದು ಬಿಜೆಪಿ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ಸಮರ್ಥಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.