ADVERTISEMENT

₹ 23,131 ಕೋಟಿ ಅಬಕಾರಿ ತೆರಿಗೆ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 22:32 IST
Last Updated 22 ಏಪ್ರಿಲ್ 2021, 22:32 IST
   

ಬೆಂಗಳೂರು: ಕೋವಿಡ್‌ ಪಿಡುಗಿನ ಮಧ್ಯೆಯೂ 2020–21ನೇ ಸಾಲಿನಲ್ಲಿ ₹ 23,131 ಕೋಟಿ ಅಬಕಾರಿ ತೆರಿಗೆ ಸಂಗ್ರಹಣೆ ಆಗಿದೆಎಂದು ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌.ಪ್ರಸಾದ್‌ ತಿಳಿಸಿದ್ದಾರೆ.

ಆಯವ್ಯಯದಲ್ಲಿ ₹ 22,700 ಕೋಟಿ ತೆರಿಗೆ ಸಂಗ್ರಹದ ಗುರಿ ನಿಗದಿ ಮಾಡಲಾಗಿತ್ತು. ಆದರೆ, ಗುರಿಯನ್ನು ಮೀರಿ ಅಂದರೆ ಶೇ 101.90 ರಷ್ಟು ತೆರಿಗೆ ಸಂಗ್ರಹಿಸಲಾಗಿದೆ ಎಂದು ಪ್ರಸಾದ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮೆಚ್ಚಗೆ ವ್ಯಕ್ತಪಡಿಸಿ ಅವರು ಪತ್ರ ಬರೆದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.