ADVERTISEMENT

ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ ವಾರ್ಷಿಕ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 15:17 IST
Last Updated 19 ಜನವರಿ 2021, 15:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಾರ್ಷಿಕ ಅಧಿವೇಶನ ಮಾರ್ಚ್‌ 19 ಮತ್ತು 20ರಂದು ನಗರದಲ್ಲಿ ನಡೆಯಲಿದೆ ಎಂದು ಆರ್‌ಎಸ್‌ಎಸ್‌ನ ಕರ್ನಾಟಕ ದಕ್ಷಿಣ ಪ್ರಚಾರ ವಿಭಾಗ ಪ್ರಮುಖ ಇ.ಎಸ್‌. ಪ್ರದೀಪ ತಿಳಿಸಿದ್ದಾರೆ.

ನಾಗಪುರದಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ಕೋವಿಡ್‌ ಕಾರಣದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ದೇಶದ ಉದ್ದಗಲದಿಂದ 500ಕ್ಕೂ ಹೆಚ್ಚು ಪ್ರತಿನಿಧಿಗಳು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಘಟನೆಯ ನೀತಿ, ನಿರೂಪಣೆಗಳ ಕುರಿತು ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸರಕಾರ್ಯವಾಹ ಆಯ್ಕೆಯೂ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಮಾಗಡಿ ರಸ್ತೆಯಲ್ಲಿರುವ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ ನಡೆಯುವ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಸರಸಂಘ ಚಾಲಕ ಡಾ. ಮೋಹನ್ ಭಾಗವತ್‌, ಸರಕಾರ್ಯವಾಹ ಭಯ್ಯಾಜಿ ಜೋಶಿ, ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಪ್ರಮುಖರಾದ ಡಾ.ಮನಮೋಹನ ವೈದ್ಯ, ಭಾಗಯ್ಯ, ಡಾ. ಕೃಷ್ಣ ಗೋಪಾಲ್, ಸುರೇಶ ಸೋನಿ, ಸಿ.ಆರ್. ಮುಕುಂದ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.