ADVERTISEMENT

ಮಾದಾರ ಚನ್ನಯ್ಯ ಗುರುಪೀಠಕ್ಕೆ ಮೋಹನ್‌ ಭಾಗವತ್‌

ಜುಲೈ 11ರಂದು ಭೇಟಿ, ಮಠಾಧೀಶರೊಂದಿಗೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 13:40 IST
Last Updated 8 ಜುಲೈ 2022, 13:40 IST
ಮೋಹನ್ ಭಾಗವತ್
ಮೋಹನ್ ಭಾಗವತ್   

ಚಿತ್ರದುರ್ಗ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಮೋಹನ್‌ ಭಾಗವತ್‌ ಅವರು ಇಲ್ಲಿನ ಮಾದಾರ ಚನ್ನಯ್ಯ ಗುರುಪೀಠಕ್ಕೆ ಜುಲೈ 11ರಂದು ಭೇಟಿ ನೀಡಲಿದ್ದು, ಹಿಂದುಳಿದ ಮತ್ತು ದಲಿತ ಮಠಾಧೀಶರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿ ನಿಗದಿಯಾಗಿರುವ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿರುವ ಭಾಗವತ್‌, ಜುಲೈ 11ರಂದು ಸಂಜೆ 7ಕ್ಕೆ ಚಿತ್ರದುರ್ಗಕ್ಕೆ ಬರಲಿದ್ದಾರೆ. ಅಂದು ರಾತ್ರಿ ಮಠದಲ್ಲಿಯೇ ವಾಸ್ತವ್ಯ ಹೂಡಲಿದ್ದು, ಜುಲೈ 12ರಂದು ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ. ಆರ್‌ಎಸ್‌ಎಸ್‌ ಸಹಸರಕಾರ್ಯವಾಹ ಮುಕುಂದ್ ಜೊತೆಗೆ ಇರಲಿದ್ದಾರೆ.

ಆರ್‌ಎಸ್‌ಎಸ್‌ ಮುಖ್ಯಸ್ಥರ ಭೇಟಿ ಸಂಪೂರ್ಣ ಖಾಸಗಿಯಾಗಿದೆ. ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಠಕ್ಕೆ ಭಾರಿ ಭದ್ರತೆ ಕಲ್ಪಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರು ಶುಕ್ರವಾರ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.