ADVERTISEMENT

ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ: RSS ವಿರುದ್ಧ ಪ್ರಿಯಾಂಕ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ನವೆಂಬರ್ 2025, 12:31 IST
Last Updated 13 ನವೆಂಬರ್ 2025, 12:31 IST
<div class="paragraphs"><p>ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ,&nbsp;ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ, RSS </p></div>

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ, ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ, RSS

   

ಬೆಂಗಳೂರು: ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ಗುಡುಗಿದ್ದಾರೆ.

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ. ಆರ್‌ಎಸ್‌ಎಸ್‌ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ’ ಎಂದು ಪ್ರಿಯಾಂಕ್ ಅವರು ‘ಎಕ್ಸ್‌’ನಲ್ಲಿ (ಟ್ವಿಟರ್) ಪೋಸ್ಟ್ ಹಂಚಿಕೊಂಡಿದ್ದಾರೆ.

ADVERTISEMENT

‘ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ. ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು’ ಎಂದು ಅವರು ತಿಳಿಸಿದ್ದಾರೆ.

‘ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್‌ಎಸ್‌ಎಸ್‌ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ’ ಎಂದು ಖರ್ಗೆ ಕುಟುಕಿದ್ದಾರೆ.

‘ಪಥಸಂಚಲನದಲ್ಲಿ 300 ಜನರು ಮಾತ್ರ ಭಾಗವಹಿಸಬೇಕು. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ. ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ ಎಂಬ ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು. ಜೈ ಸಂವಿಧಾನ’ ಎಂದು ಖರ್ಗೆ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.