ಬೆಂಗಳೂರು: ‘ಆರ್‌ಎಸ್‌ಎಸ್‌ಗೆ ಪ್ರತ್ಯೇಕವಾದ ಕಾರ್ಯಸೂಚಿಯಿದೆ. ಹಾಗೆಂದು, ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆ ಹಾಡಿದ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಗೆ ಹೋಗುತ್ತಾರೆ ಎಂದರ್ಥವಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಆರೆಸ್ಸೆಸ್ ಸಿದ್ಧಾಂತವನ್ನು ಕಾಂಗ್ರೆಸ್ ಪಕ್ಷ ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ. ಆ ಸಿದ್ಧಾಂತವನ್ನು ಜಾತ್ಯತೀತರು ವಿರೋಧಿಸುತ್ತಾರೆ’ ಎಂದರು.
‘ಧರ್ಮಾಂಧತೆ ಸಂವಿಧಾನಕ್ಕೆ ಆಘಾತಕಾರಿ. ಬಹುತ್ವದ ವಿಚಾರಕ್ಕೂ ಆಘಾತ ತರಲಿದೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.