ಕೃ. ನರಹರಿ
ಬೆಂಗಳೂರು: ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕ್ಷೇತ್ರೀಯ ಕಾರ್ಯವಾಹರಾಗಿ ಸೇವೆ ಸಲ್ಲಿಸಿದ್ದ ಕೃ. ನರಹರಿ (78) ಅವರು ಇಂದು ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನರಹರಿ ಅವರು ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಆರ್‌ಎಸ್‌ಎಸ್ ಪ್ರಮುಖರು, ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.