
ಠಾಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಕುರಿತು ವಿಚಾರಣೆ ನಡೆಸಿದ ಮಹಾರಾಷ್ಟ್ರದ ಠಾಣೆಯ ಭಿವಂಡಿ ನ್ಯಾಯಾಲಯವು ಸಾಕ್ಷಿದಾರರು ಗೈರಾಗಿದ್ದ ಕಾರಣ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ಮುಂದೂಡಿದೆ.
ಸೋಲಾಪುರದ ಬಾರ್ಶಿ ಠಾಣೆಯಲ್ಲಿ ಪೊಲೀಸ್ ಉಪ ವರಿಷ್ಠಾಧಿಕಾರಿಯಾಗಿರುವ ಸಾಕ್ಷಿದಾರ ಅಶೋಕ್ ಸಾಯಕರ್ ಅವರು ವೈಯಕ್ತಿಕ ಕಾರಣಗಳಿಂದ ವಿಚಾರಣೆ ಹಾಜರಾಗಿಲ್ಲ ಎಂದು ರಾಹುಲ್ ಪರ ವಕೀಲ ನಾರಾಯಣ್ ಅಯ್ಯರ್ ಅವರು ದೃಢಪಡಿಸಿದರು.
ಡಿ.29ರಂದು ಅಶೋಕ್ ಅವರ ಸಾಕ್ಷ್ಯ ದಾಖಲಿಸಿಕೊಳ್ಳುವ ಸಾಧ್ಯತೆಯಿದೆ. ಅಶೋಕ್ ಅವರು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆಗಿದ್ದಾಗ ಈ ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಸಿದ್ದರು. ಹಾಗಾಗಿ ಇವರನ್ನು ಸಾಕ್ಷಿ ಎಂದು ಪರಿಗಣಿಸಲಾಗಿದೆ.
ಸಾಯಕರ್ ಸಲ್ಲಿಸಿದ್ದ ವರದಿ ಆಧಾರದ ಮೇಲೆ ನ್ಯಾಯಾಲಯವು ಐಪಿಸಿ ಸೆಕ್ಷನ್ 500ರ ಅಡಿ ರಾಹುಲ್ ಗಾಂಧಿ ಅವರಿಗೆ ಈ ಹಿಂದೆ ಸಮನ್ಸ್ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.