ADVERTISEMENT

ಅ.28ರಿಂದ30ರವರೆಗೆ ಧಾರವಾಡದಲ್ಲಿ ಆರ್‌ಎಸ್ಎಸ್‌ ಕಾರ್ಯಕಾರಿ ಬೈಠಕ್‌: ಭಾಗವತ್ ಭಾಗಿ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿ ಕುರಿತು ವಿಸ್ತ್ರತ ಚರ್ಚೆಗಳು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 19:13 IST
Last Updated 26 ಅಕ್ಟೋಬರ್ 2021, 19:13 IST
ಸರಸಂಘಚಾಲಕ ಮೋಹನ ಭಾಗವತ್
ಸರಸಂಘಚಾಲಕ ಮೋಹನ ಭಾಗವತ್   

ಧಾರವಾಡ: ‘ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಇದೇ 28 ರಿಂದ 30ರವರೆಗೆ ನಡೆಯಲಿದೆ’ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ ಅಂಬೇಕರ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದ ಮುಂದಿನ ಯೋಜನೆಗಳು ಹಾಗೂ ಅಭಿವೃದ್ಧಿ, ದೇಶ ಹಾಗೂ ನಮ್ಮ ಸ್ವಾಭಿಮಾನದ ಕುರಿತು ತೆಗೆದುಕೊಳ್ಳಬೇಕಾದ ನಿಲುವುಗಳ ಬಗೆಗೆ ಚರ್ಚೆಗಳು ನಡೆಯಲಿವೆ’ ಎಂದರು.

‘ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹಾಗೂ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ. 2025ಕ್ಕೆ ಆರ್‌ಎಸ್‌ಎಸ್ ಶತಮಾನೋತ್ಸವವಿದೆ. 2021 ರಿಂದ 2024ರ ಅವಧಿಯಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಗುವುದು’ ಎಂದರು.

ADVERTISEMENT

‘ಈ ಬಾರಿ ಪೂರ್ಣ ಪ್ರಮಾಣದ ಬೈಠಕ್ ನಡೆಯಲಿದ್ದು, ಆರ್‌ಎಸ್‌ಎಸ್‌ ಮುಖ್ಯಸ್ಥ, ಸರಸಂಘಚಾಲಕ ಮೋಹನ ಭಾಗವತ್, ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ, ಅಖಿಲ ಭಾರತೀಯ ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಸೇರಿ ದೇಶದ ಸುಮಾರು 350 ಪ್ರತಿನಿಧಿಗಳು ಭಾಗವಹಿಸುವರು’ ಎಂದರು.

‘ಕೊರೊನಾ ಸಮಯದಲ್ಲಿ ‘ಸೇವಾ ಭಾರತಿ’ಯಅನೇಕ ಕಾರ್ಯಕರ್ತರು ಸೇವೆ ಸಲ್ಲಿಸಿದ್ದಾರೆ. 3ನೇ ಅಲೆ ಎದುರಿಸಲು 1.50 ಲಕ್ಷ ಸ್ಥಳಗಳಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.