ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: 'ಡಿ.ಕೆ ಶಿವಕುಮಾರ್ ಹಾಗೆ ಹೇಳಬಾರದಿತ್ತು, ಆದರೂ ಹೇಳಿದ್ದಾರೆ. ಹಾಹೆ ಹೇಳಿದ ಮೇಲೆ ಅವರು ಕ್ಷಮೆ ಕೇಳಿದ್ದಾರೆ. ಕ್ಲೋಸ್ ಆಗಿರುವ ವಿಚಾರದ ಬಗ್ಗೆ ಮತ್ತೆ ಮಾತನಾಡಲು ಮಾಡಲು ಹೋಗುವುದಿಲ್ಲ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ವಿಧಾನಸಭೆಯಲ್ಲಿ ಡಿ.ಕೆ . ಶಿವಕುಮಾರ್ ಅವರು ಆರ್‌ಎಸ್‌ಎಸ್ ಗೀತೆ ಹಾಡಿರುವ ಬಗ್ಗೆ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ಈ ವಿಷಯದ ಬಗ್ಗೆ ಇನ್ನು ಮುಂದೆ ಯಾರೂ ಮಾತನಾಡಬಾರದು' ಎಂದರು.
ಧರ್ಮಸ್ಥಳ ಪ್ರಕರಣ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಅದು ಕ್ಲೋಸ್ ಆಗಿರುವ ವಿಷಯ' ಎಂದಷ್ಟೇ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.