
ಪ್ರಜಾವಾಣಿ ವಾರ್ತೆ
ಆರ್‌ಟಿಇ
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಶೇ 25 ಸೀಟುಗಳನ್ನು ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಅದಕ್ಕಾಗಿ ನಿಯಮಗಳನ್ನು ರೂಪಿಸಬೇಕು ಎಂದು ಕರ್ನಾಟಕದ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ ಒತ್ತಾಯಿಸಿದೆ.
‘ಈ ಸಂಬಂಧ ತಕ್ಷಣವೇ ಅಧಿಸೂಚನೆ ಹೊರಡಿಸಬೇಕು. ಆನ್‌ಲೈನ್ ಪ್ರವೇಶ ಪೋರ್ಟಲ್ ಸಕ್ರಿಯಗೊಳಿಸಬೇಕು. ಪ್ರವೇಶ ವೇಳಾಪಟ್ಟಿ ಪ್ರಕಟಣೆ ಸೇರಿದಂತೆ ಎಲ್ಲಾ ಪ್ರಕ್ರಿಯಾತ್ಮಕ ಕ್ರಮಗಳನ್ನು ಪೂರ್ಣಗೊಳಿಸಬೇಕು’ ಎಂದು ಸಂಘದ ಅಧ್ಯಕ್ಷ ಬಿ.ಎನ್.ಯೋಗಾನಂದ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.