ADVERTISEMENT

ಆರ್‌ಟಿಐ: 12 ಅಧಿಕಾರಿಗಳಿಗೆ ತಲಾ ₹25,000 ದಂಡ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 23:31 IST
Last Updated 4 ಜುಲೈ 2025, 23:31 IST
<div class="paragraphs"><p>ದಂಡ (ಸಾಂದರ್ಭಿಕ ಚಿತ್ರ)</p></div>

ದಂಡ (ಸಾಂದರ್ಭಿಕ ಚಿತ್ರ)

   

– ಐಸ್ಟಾಕ್ ಚಿತ್ರ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ (ಆರ್‌ಟಿಐ) ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 12 ಅಧಿಕಾರಿಗಳಿಗೆ, ರಾಜ್ಯ ಮಾಹಿತಿ ಆಯೋಗವು ತಲಾ ₹25,000 ದಂಡ ವಿಧಿಸಿದೆ.

ADVERTISEMENT

ರಾಜ್ಯದ ವಿವಿಧ ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್‌ ಕಚೇರಿ, ಗ್ರಾಮ ಪಂಚಾಯತಿ ಕಾರ್ಯಾಲಯ ಮತ್ತು ಬಿಬಿಎಂಪಿಯ ಕಚೇರಿಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ವಿರುದ್ಧ 2024ರಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಅವುಗಳ ಪೈಕಿ 13 ಪ್ರಕರಣಗಳಲ್ಲಿ ಇದೇ ಮೇ ಮತ್ತು ಜೂನ್‌ನಲ್ಲಿ ತೀರ್ಪು ನೀಡಿದ್ದು, 12 ಅಧಿಕಾರಿಗಳಿಗೆ ದಂಡ ವಿಧಿಸಲಾಗಿದೆ ಎಂದು ಆಯೋಗವು ತಿಳಿಸಿದೆ.

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಪಾತ್ರ ಮಹತ್ವದ್ದು. ಆದರೆ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನಿರಾಕರಿಸುವ ಮೂಲಕ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳು ಸಾರ್ವಜನಿಕರಿಗೆ ತಲುಪದಿರಲು ಇದು ಕಾರಣವಾಗಿದೆ ಎಂಬುದು ದೂರುಗಳ ಪರಿಶೀಲನೆ ವೇಳೆ ಗೊತ್ತಾಗಿದೆ. ಈ ಕಾರಣದಿಂದ ಅವರಿಗೆ ದಂಡ ವಿಧಿಸಲಾಗಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.