ADVERTISEMENT

ಗ್ರಾಮೀಣ ಕುಡಿಯುವ ನೀರು ಇಲಾಖೆಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 19:07 IST
Last Updated 10 ನವೆಂಬರ್ 2021, 19:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಐಎಸ್‌ಸಿ–ಫಿಕ್ಕಿ ಜಂಟಿಯಾಗಿ ನೀಡುವ ‘ಬೆಸ್ಟ್‌ ಕಮ್ಯುನಿಕೇಷನ್‌ ಇನ್ ಸ್ಯಾನಿಟೇಷನ್‌ 2021’ ಪ್ರಶಸ್ತಿ ಲಭಿಸಿದೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು. ಕಾರ್ಯಕ್ರಮವು ವರ್ಚ್ಯುವಲ್ ಆಗಿ ನಡೆಯಿತು.

ನೈರ್ಮಲ್ಯ ಮತ್ತು ಕುಡಿಯುವ ನೀರಿನ ಕುರಿತಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣದ ಮೂಲಕ ಇಲಾಖೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳು, ಮಾಹಿತಿಗಳನ್ನು ಜನರಿಗೆ ಸುಲಭವಾಗಿ ತಲುಪಿಸುತ್ತಿರುವ ಕಾರಣಕ್ಕೆ ಪ್ರಶಸ್ತಿ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.