ADVERTISEMENT

ಉಕ್ರೇನ್‌ನಲ್ಲಿ ಭಾರಿ ಸಂಖ್ಯೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 15:41 IST
Last Updated 24 ಫೆಬ್ರುವರಿ 2022, 15:41 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ರಾಮನಗರ: ‘ಉಕ್ರೇನ್‌ನಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಭಾರಿ ಸಂಖ್ಯೆಯಲ್ಲಿ ಇದ್ದು, ಸರ್ಕಾರ ನೀಡುತ್ತಿರುವ ಮಾಹಿತಿ ಅತ್ಯಲ್ಪವಾಗಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು.

ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ರಾಜ್ಯದ ಸಾಕಷ್ಟು ವಿದ್ಯಾರ್ಥಿಗಳು ವೈದ್ಯಕೀಯ ವಿದ್ಯಾಭ್ಯಾಸಕ್ಕೆಂದು ಉಕ್ರೇನ್‌ಗೆ ಹೋಗುತ್ತಿದ್ದಾರೆ. ಸರ್ಕಾರ ಮಾತ್ರ ಬೆರಳೆಣಿಕೆ ವಿದ್ಯಾರ್ಥಿಗಳ ದಾಖಲೆ ಕೊಡುತ್ತಿದೆ. ಎಲ್ಲರನ್ನೂ ಗುರುತಿಸಿ ಅವರನ್ನು ಕರೆತರುವ ಕೆಲಸ ಆಗಬೇಕಿದೆ’ ಎಂದು ಅವರು ಒತ್ತಾಯಿಸಿದರು.

‘ ಉಕ್ರೇನ್‌ನಲ್ಲಿ ಸಿಲುಕಿರುವ ಚನ್ನಪಟ್ಟಣ ತಾಲ್ಲೂಕಿನ ನಿವೇದಿತಾ ಎಂಬ ವಿದ್ಯಾರ್ಥಿನಿ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ಅಲ್ಲಿ ಸಿಲುಕಿರುವ ರಾಜ್ಯದ ಕೆಲವು ವಿದ್ಯಾರ್ಥಿಗಳ ಮಾಹಿತಿಯನ್ನು ರಾಯಭಾರ ಕಚೇರಿಗೆ ನೀಡಿದ್ದು, ಅವರನ್ನು ರಕ್ಷಣೆ ಮಾಡುವಂತೆ ಮನವಿ ಮಾಡಿದ್ದೇನೆ. ವಿದ್ಯಾರ್ಥಿಗಳು ಒಂದು ವಾರ ಮುಂಚೆಯೇ ಬರಬೇಕಿತ್ತು. ಈಗ ಅಲ್ಲಿನ ವಿಮಾನ ನಿಲ್ದಾಣಗಳು ಮುಚ್ಚಿವೆ ಎಂದು ಎಂಬೆಸ್ಸಿ ಸಿಬ್ಬಂದಿ ಹೇಳುತ್ತಾರೆ’ ಎಂದು ಅವರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.