ADVERTISEMENT

ರಾಜೇಂದ್ರ ಕುಮಾರ್‌ ನೂತನ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 20:29 IST
Last Updated 9 ಫೆಬ್ರುವರಿ 2022, 20:29 IST
ಎಸ್‌. ರಾಜೇಂದ್ರ ಕುಮಾರ್‌
ಎಸ್‌. ರಾಜೇಂದ್ರ ಕುಮಾರ್‌   

ಬೆಂಗಳೂರು: ಕರ್ನಾಟಕ ಅಂಚೆ ವೃತ್ತದ ನೂತನ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಆಗಿ ಎಸ್‌. ರಾಜೇಂದ್ರ ಕುಮಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಅವರು, ತೆಲಂಗಾಣ ಅಂಚೆ ವೃತ್ತದ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರ್‌ ಆಗಿ ಕಾರ್ಯನಿರ್ವಹಿಸಿದ್ದರು.

ಮಂಗಳೂರಿನವರಾದ ಅವರು, 1990ನೇ ಸಾಲಿನ ಭಾರತೀಯ ಅಂಚೆ ಸೇವೆಯ ಅಧಿಕಾರಿಯಾಗಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ಲೋಹ ವಿಜ್ಞಾನದಲ್ಲಿ ಬಿ.ಟೆಕ್‌. ಪದವಿ ಪಡೆದಿರುವ ಅವರು, 1987ರಿಂದ 1990ರವರೆಗೆ ಬಿಎಚ್‌ಇಎಲ್‌ನ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಸಂಶೋಧನಾ ಎಂಜಿನಿಯರ್‌ ಆಗಿ ಅವರುವೃತ್ತಿ ಜೀವನವನ್ನುಆರಂಭಿಸಿದ್ದರು.

ADVERTISEMENT

ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಮತ್ತು ತೆಲಂಗಾಣ ಅಂಚೆ ವೃತ್ತಗಳಲ್ಲಿ ವಿವಿಧ ಉನ್ನತ ಹುದ್ದೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದಾರೆ.

2010ರಿಂದ 2015ರವರೆಗೆ ಭಾರತದ ವಿಶಿಷ್ಟ ಗುರುತು ಪ್ರಾಧಿಕಾರದ ಮಾಹಿತಿ ಕೇಂದ್ರದ ಮುಖ್ಯಸ್ಥರಾಗಿಯೂ ರಾಜೇಂದ್ರ ಕುಮಾರ್‌ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.