ADVERTISEMENT

ಜೂನ್ 2 ಅಥವಾ 3ನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಚಿವ ಸುರೇಶ್‌ ಕುಮಾರ್ ಸುಳಿವು

​ಪ್ರಜಾವಾಣಿ ವಾರ್ತೆ
Published 5 ಮೇ 2020, 21:45 IST
Last Updated 5 ಮೇ 2020, 21:45 IST
ಎಸ್.ಸುರೇಶ್‌ ಕುಮಾರ್
ಎಸ್.ಸುರೇಶ್‌ ಕುಮಾರ್   

ಬೆಂಗಳೂರು: ಜೂನ್ ಎರಡನೇ ಅಥವಾ ಮೂರನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಫೇಸ್‌ಬುಕ್‌ ಮೂಲಕ ಮಂಗಳವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನುದ್ದೇಶಿಸಿ ಮಾತನಾಡಿದ ಅವರು, ‘ಕೊರೊನಾ ಪರಿಸ್ಥಿತಿ ನೋಡಿಕೊಂಡು 20 ಅಥವಾ 30 ದಿನಗಳ ಒಳಗೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈ ವೇಳಾಪಟ್ಟಿ ಬಿಡುಗಡೆಯಾದ ಬಳಿಕ ಪರೀಕ್ಷೆಗೆ ಕನಿಷ್ಠ 15 ದಿನ ಅಂತರ ಇರುವಂತೆ ನೋಡಿಕೊಳ್ಳಲಾಗುವುದು’ ಎಂದರು.

‘ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಕೊರೊನಾ ಆತಂಕ ತಿಳಿಯಾದ ಬಳಿಕವಷ್ಟೇ, ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುವುದು. ದೂರದರ್ಶನದಲ್ಲಿ ಪ್ರಸಾರವಾಗುತ್ತಿರುವ ಪುನರ್‌ಮನನ ಕಾರ್ಯಕ್ರಮವನ್ನು ತಪ್ಪದೆ ವೀಕ್ಷಿಸಿ ಪರೀಕ್ಷೆಗೆ ಸಜ್ಜಾಗಬೇಕು’ ಎಂದು ಸಚಿವರು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.