ADVERTISEMENT

ಶಿಕ್ಷಕರಿಗೆ ಚುನಾವಣಾ ಕರ್ತವ್ಯ ಬೇಡ: ಎಸ್‌.ಸುರೇಶ್‌ ಕುಮಾರ್‌ 

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 19:58 IST
Last Updated 12 ನವೆಂಬರ್ 2019, 19:58 IST
 ಎಸ್‌.ಸುರೇಶ್‌ ಕುಮಾರ್‌
ಎಸ್‌.ಸುರೇಶ್‌ ಕುಮಾರ್‌   

ಬೆಂಗಳೂರು:ಶಿಕ್ಷಕರನ್ನು ಮತಗಟ್ಟೆ ಮಟ್ಟದ ಅಧಿಕಾರಿ-ಬಿಎಲ್ಒದಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಅವರು ಸಂಪೂರ್ಣವಾಗಿ ವಿದ್ಯಾರ್ಥಿಗಳ ಹಾಗೂ ಶೈಕ್ಷಣಿಕ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದಾರೆ.

ಶಿಕ್ಷಕರಿಗೆ ಬೋಧಕೇತರವಾದ ಇಂತಹ ಕರ್ತವ್ಯಗಳು ಹೆಚ್ಚುತ್ತಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಇದರಿಂದ ವಿದ್ಯಾರ್ಥಿ ಸಮೂಹಕ್ಕೆ ಪರೋಕ್ಷ ಹೊಡೆತ ಬೀಳುವಂತಾಗಿದೆ ಎಂದು ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT