
ಪ್ರಜಾವಾಣಿ ವಾರ್ತೆ
ಸಾಲುಮರದ ತಿಮ್ಮಕ್ಕ
ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12ಕ್ಕೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನಡೆಯಲಿದೆ.
‘ಕಲಾಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿಮ್ಮಕ್ಕ ಅವರ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಿಗ್ಗೆ 7.30 ರಿಂದ 10.30 ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದೂ ಅವರು ಹೇಳಿದ್ದಾರೆ.