ADVERTISEMENT

ಹಾವೇರಿ ಸಾಹಿತ್ಯ ಸಮ್ಮೇಳನ: ಲಾಂಛನ, ಧ್ಯೇಯವಾಕ್ಯ ಆಹ್ವಾನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 17:24 IST
Last Updated 7 ಮಾರ್ಚ್ 2022, 17:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಹಾವೇರಿಯಲ್ಲಿ ಮೇ ತಿಂಗಳಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಸಿದ್ಧತೆ ನಡೆಸಿದ್ದು, ಸಾರ್ವಜನಿಕರು ಹಾಗೂ ಕಲಾವಿದರಿಂದ ಸಮ್ಮೇಳನದ ಲಾಂಛನ ಹಾಗೂ ಧ್ಯೇಯ ವಾಕ್ಯ ಆಹ್ವಾನಿಸಿದೆ.

‘ಲಾಂಛನ ಹಾಗೂ ಧ್ಯೇಯವಾಕ್ಯವು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಜನಪದ, ಕನ್ನಡ, ಕನ್ನಡಿಗ ಹಾಗೂ ಕರ್ನಾಟಕವನ್ನು ಬಿಂಬಿಸುವ ಭಾವನಾತ್ಮಕ ಹಾಗೂ ಹಾವೇರಿ ಜಿಲ್ಲೆಯ ಪ್ರಾಮುಖ್ಯತೆ ಸಾರುವ ಅಂಶಗಳನ್ನು ಒಳಗೊಂಡಿರಬೇಕು. ಆಯ್ಕೆಯಾದ ಲಾಂಛನ ಹಾಗೂ ಧ್ಯೇಯವಾಕ್ಯ ರಚಿಸಿದವರಿಗೆ ಸೂಕ್ತ ಗೌರವ ನೀಡಲಾಗುತ್ತದೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಆಸಕ್ತರು ಈ ತಿಂಗಳ 31ರೊಳಗೆ ಲಾಂಛನ ಮತ್ತು ಧ್ಯೇಯವಾಕ್ಯ ರಚಿಸಿ ‘ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು–560018 ಅಥವಾ ಇ–ಮೇಲ್‌ kannadaparishattu@gmail.com ಗೆ ಕಳುಹಿಸಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.