ADVERTISEMENT

ಕೇಂದ್ರ ಸಾಹಿತ್ಯ ಅಕಾಡೆಮಿ: ದಿಲೀಪ್‌ ಕುಮಾರ್‌ಗೆ ಯುವ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 10:52 IST
Last Updated 18 ಜೂನ್ 2025, 10:52 IST
<div class="paragraphs"><p>ದಿಲೀಪ್‌ ಕುಮಾರ್‌</p></div>

ದಿಲೀಪ್‌ ಕುಮಾರ್‌

   

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ಕೊಡಮಾಡುವ 2025ನೇ ಸಾಲಿನ ‘ಯುವ ಪುರಸ್ಕಾರ’ ಆರ್‌. ದಿಲೀಪ್‌ ಕುಮಾರ್‌ ಅವರ ವಿಮರ್ಶಾ ಸಂಕಲನ ‘ಪಚ್ಚೆಯ ಜಗುಲಿ‘ಗೆ ಲಭಿಸಿದೆ. 

ಪ್ರಶಸ್ತಿ ಪುರಸ್ಕೃತರು ತಲಾ ₹ 50 ಸಾವಿರ ನಗದು ಹಾಗೂ ಫಲಕಗಳನ್ನು ಪಡೆಯಲಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ADVERTISEMENT

ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಲೀಪ್‌ ಕುಮಾರ್‌ ಉಪನ್ಯಾಸಕರಾಗಿಯೂ ಕೆಲಸ ಮಾಡಿದ್ದಾರೆ. ಅವರು ಹಾರುವ ಹಂಸೆ ಎಂಬ ಕವನ ಸಂಕಲನವನ್ನು ಪ್ರಕಟಿಸಿದ್ದಾರೆ. ಅವರ ಹಲವು ಲೇಖನಗಳು ಹಾಗೂ ಕವನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಯುವ ಪುರಸ್ಕಾರಕ್ಕೆ ಕನ್ನಡದ ಲೇಖಕರಾದ ಟಿ.ಪಿ ಅಶೋಕ, ವಿಕ್ರಂ ವಿಸಾಜಿ ಹಾಗೂ ಜಿ.ಎಂ ಹೆಗ್ಡೆ ತೀರ್ಪುಗಾರರಾಗಿದ್ದರು. 

ಪಚ್ಚೆಯ ಜಗುಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.