ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರ ಆಡಳಿತ ವೈಖರಿ ವಿರೋಧಿಸಿ ಪದ್ಮಿನಿ ನಾಗರಾಜು ಅವರು ಪರಿಷತ್‌ನ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಾಹಿತ್ಯ ಪರಿಷತ್ ವಲಯದಲ್ಲಿ ಜೋಶಿ ಅವರ ಕಾರ್ಯವೈಖರಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಕೇಂದ್ರ ಸಾಹಿತ್ಯ ಪರಿಷತ್‌ನ ಪ್ರಮುಖ ಪದಾಧಿಕಾರಿಯೊಬ್ಬರು ನೀಡಿದ ಮೊದಲ ರಾಜೀನಾಮೆ ಇದಾಗಿದೆ.
ಲೇಖಕಿ, ಸಂಘಟಕಿಯೂ ಆದ ಪದ್ಮಿನಿ ಅವರು ಜಯನಗರ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರ ಹುದ್ದೆಗೆ ರಾಜೀನಾಮೆ ನೀಡಿ, ಸಾಹಿತ್ಯ ಪರಿಷತ್‌ನ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದರು. ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯೆಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.