ADVERTISEMENT

ಸಾರಿಗೆ ನಿಗಮ ನೌಕರರಿಗೆ ಶೀಘ್ರ ವೇತನ: ಸಚಿವ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 6 ಮೇ 2020, 11:21 IST
Last Updated 6 ಮೇ 2020, 11:21 IST
ಸಾರಿಗೆ ಸಚಿವ ಲಕ್ಷಣ ಸವದಿ ಮೆಜೆಸ್ಟಿಕ್‌ನಲ್ಲಿ ಬುಧವಾರ ಕೊರೊನಾ ವಾರಿಯರ್ಸ್‌ ಮೇಲೆ ಪುಷ್ಟವೃಷ್ಟಿ ಮಾಡಿ ಗೌರವ ಸಲ್ಲಿಸಿದರು.
ಸಾರಿಗೆ ಸಚಿವ ಲಕ್ಷಣ ಸವದಿ ಮೆಜೆಸ್ಟಿಕ್‌ನಲ್ಲಿ ಬುಧವಾರ ಕೊರೊನಾ ವಾರಿಯರ್ಸ್‌ ಮೇಲೆ ಪುಷ್ಟವೃಷ್ಟಿ ಮಾಡಿ ಗೌರವ ಸಲ್ಲಿಸಿದರು.   

ಬೆಂಗಳೂರು:‘ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ಸಿಬ್ಬಂದಿಗೆ ಏಪ್ರಿಲ್ ತಿಂಗಳ ವೇತನ ಬಟವಾಡೆಗೆ ಅಗತ್ಯವಾದ ₹ 326 ಕೋಟಿ ಹಣವನ್ನು ಸರ್ಕಾರದಿಂದ ನೇರವಾಗಿ ಪಡೆದು 3-4 ದಿನಗಳಲ್ಲಿ ನೌಕರರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು’ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ‌ಮಾತನಾಡಿದ ಅವರು, ‘ನಾನು ಮುಖ್ಯಮಂತ್ರಿ ಬಳಿ ಈ ಬಗ್ಗೆ ಮಾತನಾಡಿದ್ದೇನೆ. ಸಾರಿಗೆ ಇಲಾಖೆ ಸಿಬ್ಬಂದಿ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ’ಎಂದರು.

ನಾಲ್ಕು ದಿನಗಳಿಂದ 3,500 ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲಾಗಿದೆ. ಸಾರಿಗೆ ಸಿಬ್ಬಂದಿ ಭಯಪಡದೇ ಕಾರ್ಯನಿ ರ್ವಹಿಸುತ್ತಿದ್ದಾರೆಎಂದರು.

ADVERTISEMENT

ಗುರುವಾರ ಕೊನೆಯದಾಗಿ ಉಚಿತವಾಗಿ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸುವ ಕೆಲಸ ಮಾಡುತ್ತೇವೆ. ಕಾರ್ಮಿಕರಿಗೆ ಹಲವು ಸಂಘ ಸಂಸ್ಥೆಗಳು ಬ್ರೆಡ್ ಹಾಗೂ ಆಹಾರಗಳನ್ನು ಸಾಕಷ್ಟು ಕೊಟ್ಟಿದ್ದಾರೆಎಂದೂ ಸವದಿ ಹೇಳಿದರು.

ಮಾಧ್ಯಮ ಮಿತ್ರರು ಕೂಡ ನಮ್ಮ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಸರ್ಕಾರದ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆಎಂದರು.

ಕೊರೊನಾ ವಾರಿಯರ್ಸ್‌ಗೆ ಪುಷ್ಪವೃಷ್ಟಿ

ಸಾರಿಗೆ ಸಚಿವ ಲಕ್ಷಣ ಸವದಿ ಕೊರೊನಾ ವಿರುದ್ಧದ ಹೋರಾಟದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ ಕೆಎಸ್ಆರ್ಟಿಸಿ ಮತ್ತು ಇತರ ಸಾರಿಗೆ ನಿಗಮಗಳ ಚಾಲಕರು, ನಿರ್ವಾಹಕರು,ವೈದ್ಯರು, ಪೋಲಿಸ್ ಸಿಬ್ಬಂದಿ,ಬಿಬಿಎಂಪಿಯ ಪೌರ ಕಾರ್ಮಿಕರು, ಸಿವಿಲ್ ಡಿಪೆನ್ಸ್ ಸಿಬ್ಬಂದಿಯ ಮೇಲೆ ಪುಷ್ಪವೃಷ್ಟಿ ಮಾಡಿ ಗೌರವಿಸಿದರು.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.