(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ವೇತನ ಪಾವತಿಸಲಾಗಿದೆ. ಈ ವೇತನ ಪಾವತಿಗೆ ಸಂಬಂಧಿಸಿದಂತೆ ಎನ್‌ಎಚ್‌ಎಂ ₹ 173.28 ಕೋಟಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ, 15ನೇ ಹಣಕಾಸು ಆಯೋಗವು ಆರೋಗ್ಯ ಕ್ಷೇತ್ರಕ್ಕೆ ಮೀಸಲಿಟ್ಟ ಅನುದಾನವನ್ನು ತಾತ್ಕಾಲಿಕವಾಗಿ ಬಳಸಲಾಗಿದೆ. ಇದೇ 27ರೊಳಗೆ ವೇತನ ಪಾವತಿ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಆದೇಶದಲ್ಲಿ ಎನ್‌ಎಚ್‌ಎಂ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.