ADVERTISEMENT

ಸಚಿವಾಲಯ: ಗುತ್ತಿಗೆ ಸಿಬ್ಬಂದಿಯ ವೇತನ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2024, 15:50 IST
Last Updated 24 ಡಿಸೆಂಬರ್ 2024, 15:50 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ವಿಧಾನಸಭೆ, ವಿಧಾನಪರಿಷತ್‌, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿಯ ಸಂಚಿತ ವೇತನವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ವೇತನ ನ. 1ರಿಂದಲೇ ಅನ್ವಯವಾಗಲಿದೆ.

7ನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ‘ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು– 2024’ನ್ನು ರಾಜ್ಯ ಸರ್ಕಾರ ಈಗಾಗಲೇ ಜಾರಿಗೊಳಿಸಿದ್ದು, ಅದರ ಅನ್ವಯ ಗುತ್ತಿಗೆ ಸಿಬ್ಬಂದಿಯ ಸಂಚಿತ ವೇತನವನ್ನೂ ಪರಿಷ್ಕರಿಸಲಾಗಿದೆ.

ADVERTISEMENT

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳ, ಸಚಿವರ ಸ್ಥಾನಮಾನ ಪಡೆದ ಪ್ರಾಧಿಕಾರಗಳ ಆಪ್ತ ಶಾಖೆಗಳಲ್ಲಿ ಮತ್ತು ಕೆಲವು ಆಯೋಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಸಂಚಿತ ವೇತನವೂ ಪರಿಷ್ಕರಣೆ ಆಗಲಿದೆ. ಆದರೆ, ಈ ಪರಿಷ್ಕರಣೆಯು ಹೊರಗುತ್ತಿಗೆ ಸಿಬ್ಬಂದಿಗೆ ಅನ್ವಯಿಸದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪರಿಷ್ಕರಣೆ ವಿವರ: ವಿಶೇಷ ಅಧಿಕಾರಿ/ವಿಶೇಷ ಕರ್ತವ್ಯಾಧಿಕಾರಿಗಳಿಗೆ ₹ 69,250, ಸಹಾಯಕರ ಹುದ್ದೆ ಮತ್ತು ಶೀಘ್ರಲಿಪಿಗಾರರಿಗೆ ₹ 49,050, ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ, ಬೆರಳಚ್ಚುಗಾರರು, ವಾಹನ ಚಾಲಕರಿಗೆ ₹ 34,100, ‘ಡಿ’ ದರ್ಜೆ ನೌಕರರಿಗೆ ₹ 27 ಸಾವಿರವರೆಗೆ ವೇತನ ಪರಿಷ್ಕರಣೆ ಆಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.