ಬೆಂಗಳೂರು: ‘ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, 'ಯಾವ ಪುರುಷಾರ್ಥಕ್ಕೆ ಅವರು ಪಾದಯಾತ್ರೆ ಮಾಡುತ್ತಿದ್ದಾರೊ ಗೊತ್ತಿಲ್ಲ’ ಎಂದು ಕಿಡಿಕಾರಿದರು.
‘ಬಿಜೆಪಿ- ಜೆಡಿಎಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ನಾಲ್ಕು ವರ್ಷಗಳ ಅವರ ಅಧಿಕಾರ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಅದಕ್ಕೆ ಜನ ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹಿಟ್ ಆ್ಯಂಡ್ ರನ್ ಮಾಡುತ್ತಿದ್ದಾರೆ’ ಎಂದರು.
‘ಸಿದ್ದರಾಮಯ್ಯ ಮೇಲಿನ ಆರೋಪ ನಿರಾಧಾರ. ಕೇಂದ್ರ ಸರ್ಕಾರದ ನೇತೃತ್ವ ವಹಿಸಿರುವ ಮೋದಿಯವರು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಷಡ್ಯಂತ್ರ ಮಾಡುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ. ಬಿಜೆಪಿ ಅವಧಿಯ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ಕೆಲಸ ಮಾಡಿ, ಅವರನ್ನು ಬೆತ್ತಲೆ ಮಾಡುತ್ತೇವೆ’ ಎಂದರು.
‘ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ 21 ಹಗರಣಗಳ ಬಗ್ಗೆ ನಾವು ತನಿಖೆ ಮಾಡುತ್ತೇವೆ. ತಮ್ಮ ಅವಧಿಯ ಕರ್ಮಕಾಂಡ ಮುಚ್ಚಿ ಹಾಕಿಕೊಳ್ಳಲು ನಮ್ಮ ಮೇಲೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.