ADVERTISEMENT

ನಿಸ್ಪೃಹ ಸಾಗರ ಮುನಿಮಹಾರಾಜ್ ಸಮಾಧಿ ಮರಣ

ಮಹಾಮಸ್ತಕಾಭಿಷೇಕಕ್ಕೆ ಬಂದಿದ್ದ ಮುನಿಯಿಂದ ಸಲ್ಲೇಖನ ವ್ರತ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2019, 19:36 IST
Last Updated 19 ಫೆಬ್ರುವರಿ 2019, 19:36 IST
ಧರ್ಮಸ್ಥಳದಲ್ಲಿ ಮಂಗಳವಾರ ಸಮಾಧಿ ಮರಣ ಹೊಂದಿದ ನಿಷ್ಪೃಹ ಸಾಗರ ಮುನಿ ಮಹಾರಾಜರನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಧರ್ಮಸ್ಥಳದಲ್ಲಿ ಮಂಗಳವಾರ ಸಮಾಧಿ ಮರಣ ಹೊಂದಿದ ನಿಷ್ಪೃಹ ಸಾಗರ ಮುನಿ ಮಹಾರಾಜರನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.   

ಉಜಿರೆ: ಧರ್ಮಸ್ಥಳದಲ್ಲಿ ನಡೆದ ಮಹಾಮಸ್ತಕಾಭಿಷೇಕಕ್ಕೆ ಬಂದಿದ್ದ ಜೈನ ಮುನಿ ನಿಸ್ಪೃಹ ಸಾಗರ ಮುನಿಮಹಾರಾಜರು (75) ಮಂಗಳವಾರ ಬೆಳಿಗ್ಗೆ ಚಂದ್ರನಾಥ ಸ್ವಾಮಿ ಬಸದಿ ಬಳಿ ಮುನಿಗಳು ವಾಸ್ತವ್ಯ ಇರುವ ಕುಟೀರದಲ್ಲಿ ಸಮಾಧಿ ಮರಣ ಹೊಂದಿದರು.

ಸೋಮವಾರ ಅವರು ಅಮರಣಾಂತ ಉಪವಾಸ ಕೈಗೊಳ್ಳುವ ಸಲ್ಲೇಖನ ವ್ರತ ಧಾರಣೆ ಮಾಡಿದ್ದರು.

ಜೈನ ಸಂಪ್ರದಾಯದಂತೆ ಮರಣವೇ ಮಹಾನವಮಿ ಎಂದು ಭಾವಿಸಿ ಸಾವನ್ನು ಕೂಡ ಮಹೋತ್ಸವದಂತೆ ಆಚರಿಸಿ ಸಂಭ್ರಮಿಸುತ್ತಾರೆ. ಏಕೆಂದರೆ ಸಾವು ದೇಹಕ್ಕೆ ಮಾತ್ರ. ಆತ್ಮನಿಗೆ ಸಾವಿಲ್ಲ. ದೇಹ ನಶ್ವರ, ಆತ್ಮ ಶಾಶ್ವತ.

ADVERTISEMENT

ನಿಸ್ಪೃಹ ಸಾಗರ ಮುನಿ ಮಹಾರಾಜರು ರಾಜಸ್ಥಾನದ ಕಿಶನ್‌ಗಢ ನಿವಾಸಿ. ಅವರ ಪೂರ್ವಾಶ್ರಮದ ಹೆಸರು ಪ್ರೇಮಚಂದ್ ಪಹಾಡಿಯಾ. 2009ರಲ್ಲಿ ಚಂಪಾಪುರಿಯಲ್ಲಿ ಮುನಿ ದೀಕ್ಷೆ ಪಡೆದಿದ್ದರು.

ಶ್ರೀ 108 ಆಚಾರ್ಯ ವರ್ಧಮಾನ ಸಾಗರ ಮುನಿ ಮಹಾರಾಜರು ಮತ್ತು ಶ್ರೀ 108 ಪುಷ್ಪದಂತ ಸಾಗರ ಮುನಿ ಮಹಾರಾಜರ ನೇತೃತ್ವದಲ್ಲಿ ಬಸದಿಯ ಬಳಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.