
ಪ್ರಜಾವಾಣಿ ವಾರ್ತೆ
ಬೆಂಗಳೂರು: ಹುದ್ದೆ ನಿರೀಕ್ಷಣೆಯಲ್ಲಿದ್ದ ಐಎಎಸ್ ಅಧಿಕಾರಿ ಸಲ್ಮಾ ಕೆ. ಫಾಹಿಮ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಂ. ಕನಗ ವಲ್ಲಿ ಅವರನ್ನು ಆಹಾರ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರಿಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (ಕೆಎಸ್‌ಎಂಎಸ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.