ADVERTISEMENT

ಸಿಎಂ ಸಿದ್ದರಾಮಯ್ಯಗೆ ಸಾಲು ಮರದ ತಿಮ್ಮಕ್ಕ ಶುಭ ಹಾರೈಕೆ

​ಪ್ರಜಾವಾಣಿ ವಾರ್ತೆ
Published 23 ಮೇ 2023, 7:21 IST
Last Updated 23 ಮೇ 2023, 7:21 IST
   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮಂಗಳವಾರ ಭೇಟಿ ಮಾಡಿ ಶುಭ ಹಾರೈಸಿದರು.‌

‘ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ‘ ಎಂದು ತಿಮ್ಮಕ್ಕ ಅವರು ಮುಖ್ಯಮಂತ್ರಿಗೆ ಶುಭ ಹಾರೈಸಿದರು.

‘ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ. ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ‘ ಎಂದು ತಿಮ್ಮಕ್ಕ ಅವರಿಗೆ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.