ADVERTISEMENT

ಬೆಳಗಾವಿ–ಧಾರವಾಡ ರೈಲು ಮಾರ್ಗಕ್ಕೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 16:10 IST
Last Updated 5 ಫೆಬ್ರುವರಿ 2020, 16:10 IST

ಬೆಳಗಾವಿ: ಬೆಳಗಾವಿ-ಕಿತ್ತೂರು–ಧಾರವಾಡ ನಡುವೆ ನೇರ ರೈಲು ಓಡಿಸಬೇಕು ಎನ್ನುವ ಈ ಭಾಗದ ಜನರ ಹಲವು ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ₹ 988.30 ಕೋಟಿ ಮೊತ್ತದಲ್ಲಿ ಹೊಸದಾಗಿ ಮಾರ್ಗ ನಿರ್ಮಿಸುವ ಯೋಜನೆಗೆ ಸೋಮವಾರ ಮಂಡನೆಯಾದ ಕೇಂದ್ರ ಬಜೆಟ್‌ನಲ್ಲಿ ಮಂಜೂರಾತಿ ನೀಡಲಾಗಿದೆ.

73 ಕಿ.ಮೀ. ಉದ್ದದ ಮಾರ್ಗ ಇದಾಗಿದೆ.

ತಿಂಗಳ ಹಿಂದಷ್ಟೇ ನೈರುತ್ಯ ರೈಲ್ವೆಯಿಂದ ಯೋಜನಾ ವರದಿ ತಯಾರಿಸಿ ಸಲ್ಲಿಸಿತ್ತು. ಅದಕ್ಕೆ ಮಂಜೂರಾತಿ ಕೊಡಿಸುವಲ್ಲಿ ಇಲ್ಲಿನ ಸಂಸದರೂ ಆಗಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಯಶಸ್ವಿಯಾಗಿದ್ದಾರೆ. ತವರಿಗೆ ದೊಡ್ಡ ಕೊಡುಗೆಯನ್ನೇ ಕೊಡಿಸಿದ್ದಾರೆ. ಇದು, ಇಲ್ಲಿನ ಜನರ ಸಂತಸಕ್ಕೆ ಕಾರಣವಾಗಿದೆ.‌

ADVERTISEMENT

ಮಾರ್ಗ ನಿರ್ಮಾಣವಾದಲ್ಲಿ, ಈ ರೈಲು ಧಾರವಾಡದಿಂದ ಕ್ಯಾರಕೊಪ್ಪ, ಕಿತ್ತೂರು, ಹಿರೆಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಕೆ.ಕೆ. ಕೊಪ್ಪ, ಯಳ್ಳೂರು ಮಾರ್ಗವಾಗಿ ಬೆಳಗಾವಿ ತಲುಪಲಿದೆ. 11 ನಿಲ್ದಾಣಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಮಾರ್ಗದಲ್ಲಿ 15 ಮೇಲ್ಸೇತುವೆ ಸೇರಿದಂತೆ 140 ಸೇತುವೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.