ADVERTISEMENT

ಪ್ರಭಾರ ಜಿಲ್ಲಾಧಿಕಾರಿಯಾಗಿ ಸಂಗಪ್ಪ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 15:52 IST
Last Updated 28 ನವೆಂಬರ್ 2022, 15:52 IST

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ ಅವರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ವಿಭಾಗದ ವಿಶೇಷ ಆಯುಕ್ತ ಡಾ. ಹರೀಶ್‌ ಕುಮಾರ್‌ ಕೆ. ಅವರಿಗೆ ಪಾಲಿಕೆಯ ಆಡಳಿತ ವಿಭಾಗದ ವಿಶೇಷ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಿ ಆದೇಶಿಸಲಾಗಿದೆ.

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಯ ಕಾರ್ಯಕರ್ತರಿಗೆ ‘ಮತಗಟ್ಟೆ ಹಂತದ ಅಧಿಕಾರಿ’ ಎಂಬ ಹೆಸರಿನಡಿ ಗುರುತಿನ ಚೀಟಿ ನೀಡಿದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಮತ್ತು ಬಿಬಿಎಂಪಿ ವಿಶೇಷ ಆಯುಕ್ತ ಎಸ್‌. ರಂಗಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು. ಈ ಎರಡೂ ಹುದ್ದೆಗಳ ಹೆಚ್ಚುವರಿ ಹೊಣೆಯನ್ನು ಸಂಗಪ್ಪ ಮತ್ತು ಹರೀಶ್‌ ಕುಮಾರ್‌ ಅವರಿಗೆ ನೀಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.