ADVERTISEMENT

ರಾಯಣ್ಣ ಪ್ರತಿಮೆ‌ ವಿವಾದ | ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಖಂಡನೀಯ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 10:03 IST
Last Updated 28 ಆಗಸ್ಟ್ 2020, 10:03 IST
ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ   

ಬೆಂಗಳೂರು: ಬೆಳಗಾವಿಯಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾನು ಈಗಷ್ಟೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ,ಅಲ್ಲಿನ ಜಿಲ್ಲಾಧಿಕಾರಿ‌, ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ.

ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ.ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು.ಕನ್ನಡ ಸಂಘಟನೆಗಳುಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಸಿದ್ದರಾಮಯ್ಯಅವರು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.