ADVERTISEMENT

ಹಿಂದುಳಿದ ವರ್ಗದ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿ: ಸಿಎಂಗೆ ಲಾಡ್‌ ಮನವಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 15:33 IST
Last Updated 30 ಜುಲೈ 2025, 15:33 IST
<div class="paragraphs"><p>ಸಂತೋಷ್‌ ಲಾಡ್‌</p></div>

ಸಂತೋಷ್‌ ಲಾಡ್‌

   

ಬೆಂಗಳೂರು: ಹಿಂದುಳಿದ ವರ್ಗಗಳ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿ ಸ್ಥಾಪಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ 2015ರಲ್ಲಿ ನಡೆದ ಸಮೀಕ್ಷೆ ಪ್ರಕಾರ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ 70ರಷ್ಟು (4.42 ಕೋಟಿ) ಇದೆ.  1,880 ಜಾತಿ ಮತ್ತು ಉಪಜಾತಿಗಳು ಬರುತ್ತವೆ. ಈ ವರ್ಗದ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ಪ್ರತ್ಯೇಕ ಬಂಡವಾಳ, ಅನುದಾನ ವ್ಯವಸ್ಥೆ ಇಲ್ಲ. ಹಾಗಾಗಿ, ಹಿಂದುಳಿದ ವರ್ಗಗಳ ಯುವಕರು ಕೈಗಾರಿಕೆಗಳ ಸ್ಥಾಪನೆಗೆ ಒಲವು ತೋರುತ್ತಿಲ್ಲ. ಅದಕ್ಕಾಗಿ ಪ್ರತ್ಯೇಕ ನಿಧಿ ಸ್ಥಾಪಿಸಬೇಕು. ಹೊಸ ನೀತಿ ರೂಪಿಸಬೇಕು ಎಂದು ಕೋರಿದ್ದಾರೆ.

ADVERTISEMENT

ನಿಧಿಗೆ ಅಗತ್ಯವಾದ ಅನುದಾನವನ್ನು ಸರ್ಕಾರ ನೀಡಬೇಕು. ಖಾಸಗಿ ವಲಯದ ಹೂಡಿಕೆದಾರರ ಮೂಲಕವೂ ಸಂಗ್ರಹಿಸಬೇಕು. ನವೋದ್ಯಮಗಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.