ಬೆಂಗಳೂರು: ಭಯೋತ್ಪಾದಕ ದಾಳಿ ನಡೆದ ಜಮ್ಮು ಕಾಶ್ಮೀರದ ಪಹಲ್ಗಾಮ್‌ಗೆ ರಾಜ್ಯದಿಂದ ಸಚಿವ ಸಂತೋಷ್ ಲಾಡ್ ತೆರಳಿದ್ದು, ಉಗ್ರರ ದಾಳಿಯಲ್ಲಿ ಮೃತಪಟ್ಟ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಅಲ್ಲದೆ, ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕೆಲಸದಲ್ಲಿ ನಿರತರಾಗಿದ್ದು, ಸಂತ್ರಸ್ತರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳ ತಂಡಕ್ಕೆ ಸೂಚಿಸಿದ್ದಾರೆ.
ಮೃತಪಟ್ಟ ಕನ್ನಡಿಗರ ಮೃತದೇಹಗಳನ್ನು ರಾಜ್ಯಕ್ಕೆ ತರುವ ಕಾರ್ಯಾಚರಣೆಯಲ್ಲಿಯೂ ಸಚಿವರು ತೊಡಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.