ADVERTISEMENT

ಹಿರಿಯ ಕಲಾವಿದೆ ಬಿ. ಸರೋಜಾದೇವಿ ಹೆಸರಿನಲ್ಲಿ ಪ್ರಶಸ್ತಿ ಘೋಷಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 16:22 IST
Last Updated 23 ಜುಲೈ 2025, 16:22 IST
<div class="paragraphs"><p> ನಟಿ ಬಿ. ಸರೋಜಾದೇವಿ</p></div>

ನಟಿ ಬಿ. ಸರೋಜಾದೇವಿ

   

-ಪ್ರಜಾವಾಣಿ ಚಿತ್ರ

ಬೆಂಗಳೂರು: ಹಿರಿಯ ಕಲಾವಿದೆ ಬಿ. ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಿಜೆಪಿ ನಾಯಕಿಯೂ ಆಗಿರುವ ನಟಿ ತಾರಾ ಅನುರಾಧ ಮನವಿ ಸಲ್ಲಿಸಿದರು.

ADVERTISEMENT

ಸಿದ್ದರಾಮಯ್ಯ ಅವರನ್ನು ‘ಕಾವೇರಿ’ ನಿವಾಸದಲ್ಲಿ ಗುರುವಾರ ತಾರಾ ಅವರು ಭೇಟಿ ಮಾಡಿದರು. ‘ಅಭಿನಯ ಸರಸ್ವತಿ’ ಎಂದೇ ಖ್ಯಾತರಾಗಿದ್ದ ಬಿ.ಸರೋಜಾ ದೇವಿ ಅವರು ಜುಲೈ 14ರಂದು ನಿಧನರಾಗಿದ್ದಾರೆ.

ಅಹವಾಲು ಸ್ವೀಕಾರ: ಮುಖ್ಯಮಂತ್ರಿಯವರು ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಗುರುವಾರ ಅಹವಾಲು ಸ್ವೀಕರಿಸಿದರು. ಜನರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡ ಅವರು, ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.