ಬೆಂಗಳೂರು: ಕನ್ನಡಿಗರಿಗೆ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಇದೇ 13ರಂದು ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ನಾಗೇಶ್, ‘ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ 2019ರ ನವೆಂಬರ್ 4ರಿಂದ ನಗರದ ಮೌರ್ಯ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ಇಂದಿಗೆ 93 ದಿನಗಳು ಪೂರೈಸಿರುವ ಧರಣಿಗೆ ಹಲವು ರಾಜಕೀಯ ಮುಖಂಡರು, ಸಾಹಿತಿಗಳು ಹಾಗೂ ಮಠಾಧೀಶರು ಬೆಂಬಲ ನೀಡಿದ್ದಾರೆ’ ಎಂದರು.
‘ಧರಣಿ ವೇಳೆಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹಾಗೂ ಕಾರ್ಮಿಕ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ, ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.