ADVERTISEMENT

ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಎಐಎಡಿಎಂಕೆ ನಾಯಕಿ ಶಶಿಕಲಾಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 7:11 IST
Last Updated 22 ಜನವರಿ 2021, 7:11 IST
ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ
ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ    

ಬೆಂಗಳೂರು: ಎಐಎಡಿಎಂಕೆ ನಾಯಕಿವಿ.ಕೆ. ಶಶಿಕಲಾ ಅವರಿಗೆ ಕೊರೊನಾವೈರಸ್‌ ಸೋಂಕು ದೃಢಪಟ್ಟಿದ್ದು, ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

‘ಕೋವಿಡ್‌–19 ಮಾತ್ರವಲ್ಲದೆ, ಡಯಾಬಿಟಿಸ್‌, ಅಧಿಕ ರಕ್ಷದೊತ್ತಡ ಮತ್ತು ಥೈರಾಯ್ಡ್‌ ಹಾರ್ಮೋನ್‌ ಉತ್ಪತ್ತಿ ಕೊರತೆ, ತೀವ್ರ ನ್ಯುಮೋನಿಯಾದಿಂದ ಬಳಲುತ್ತಿರುವ ಶಶಿಕಲಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಅಳಿಯ ಟಿಟಿವಿ ದಿನಕರನ್‌ ಗುರುವಾರ ತಿಳಿಸಿದ್ದರು.

ADVERTISEMENT

63 ವರ್ಷದ ಶಶಿಕಲಾ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ನಿಕಟವರ್ತಿಯಾಗಿದ್ದರು. ಸದ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಅವರ ಶಿಕ್ಷೆ ಅವಧಿ ಜನವರಿ 27 ರಂದು ಪೂರ್ಣಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.