ADVERTISEMENT

ಅರಣ್ಯ ತೆರವು; ಚರ್ಚಿಸಿ ತೀರ್ಮಾನ: ಸಚಿವ ಸತೀಶ ಜಾರಕಿಹೊಳಿ

ಅರಣ್ಯ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2019, 19:17 IST
Last Updated 22 ಫೆಬ್ರುವರಿ 2019, 19:17 IST

ಬೆಳಗಾವಿ: ‘ಅರಣ್ಯ ಹಕ್ಕಿಲ್ಲದವರನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಯಾವ ಆಧಾರದ ಮೇಲೆ ಆದೇಶ ನೀಡಿದೆ ಎನ್ನುವುದನ್ನು ಅಧ್ಯಯನ ಮಾಡುತ್ತೇವೆ. ಮುಂದೆ ಏನು ಮಾಡಬೇಕು ಎನ್ನುವುದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಶುಕ್ರವಾರ ಇಲ್ಲಿ ತಿಳಿಸಿದರು.

‘ಅರಣ್ಯದಲ್ಲಿ ವಾಸಿಸಲು ಹಕ್ಕು ನೀಡುವಂತೆ ಸಲ್ಲಿಸಲಾಗಿದ್ದ ಸಾವಿರಾರು ಅರ್ಜಿಗಳು ತಿರಸ್ಕೃತಗೊಳ್ಳಲು ಕಾರಣವೇನು? ಇಂತಹ ಅರ್ಜಿಗಳ ಪುನರ್‌ ಪರಿಶೀಲನೆ ಮಾಡಲು ಸಾಧ್ಯವೇ ಎನ್ನುವುದರ ಬಗ್ಗೆಯೂ ಗಮನ ಹರಿಸುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT